Home ಜಿಲ್ಲೆ ರಸ್ತೆ ಅಪಘಾತ: ಪ್ರಸಿದ್ಧ ಯಕ್ಷಗಾನ ಕಲಾವಿದ ಮೃತ್ಯು

ರಸ್ತೆ ಅಪಘಾತ: ಪ್ರಸಿದ್ಧ ಯಕ್ಷಗಾನ ಕಲಾವಿದ ಮೃತ್ಯು

by admin
0 comments

ಕುಂದಾಪುರ: ಅರಾಟೆ ಸೇತುವೆ ಬಳಿ ನಡೆದ ಭೀಕರ ಘಟನೆ

ಕುಂದಾಪುರ: ಅರಾಟೆ ಸೇತುವೆ ಬಳಿ ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಕಲಾವಿದರನ್ನು ಹಟ್ಟಿಯಂಗಡಿ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ (40) ಎಂದು ಗುರುತಿಸಲಾಗಿದೆ.

ಶಿರೂರಿನ ತೂದಳ್ಳಿಯಲ್ಲಿ ನಡೆಯಬೇಕಿದ್ದ ಹಟ್ಟಿಯಂಗಡಿ ಮೇಳದ ಆಟ ಭಾರೀ ಮಳೆಯಿಂದಾಗಿ ರದ್ದಾಗಿತ್ತು. ಕಾರ್ಯಕ್ರಮ ರದ್ದಾದ ನಂತರ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ ಅವರು ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

banner

ಅರಾಟೆ ಸೇತುವೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಏಕಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಜಾರಿಗೊಳಿಸಲಾಗಿತ್ತು. ಗೊಂದಲಕ್ಕೆ ಒಳಗಾದ ನಾರಾಯಣ ಪೂಜಾರಿ ಅವರು ಬದಲಾದ ಸಂಚಾರ ವ್ಯವಸ್ಥೆಯ ಅರಿವಿಲ್ಲದ ತಡೆಗೋಡೆಯಾಗಿ ಇರಿಸಲಾಗಿದ್ದ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.