ಬೆಂಗಳೂರು: ಚಿಕ್ಕಬಾಣಾವರದಲ್ಲಿ ಪತ್ನಿಯಿಂದ ದೂರವಾಗಿ, ಒಂಟಿಯಾಗಿ ವಾಸವಾಗಿದ್ದ ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾ ಟೆಕ್ಕಿ ಪ್ರಶಾಂತ್ ನಾಯರ್ ಎಂದು ತಿಳಿದು ಬಂದಿದೆ.
ಚಿಕ್ಕಬಾಣಾವರದಲ್ಲಿನ ಡಿ ಎಕ್ಸ್ ಸ್ಮಾರ್ಟ್ ಎಂಬ ಅಪಾರ್ಟ್ಮೆಂಟ್ನಲ್ಲಿ ಪ್ರಶಾಂತ್ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಪ್ರಶಾಂತ್ ಕಳೆದ ಎರಡು ವರ್ಷಗಳಿಂದ ಪತ್ನಿಯಿಂದ ದೂರ ಇದ್ದರು. ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು. ಮೂರು ತಿಂಗಳ ಹಿಂದೆ ದಂಪತಿ ಪರಸ್ಪರ ಒಪ್ಪಿಗೆಯಿಂದ ವಿಚ್ಚೇದನ ಕೊರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಶಾಂತ್ ಒಂಟಿಯಾಗಿ ಇರುತಿದ್ದರು ಎಂದು ತಿಳಿದುಬಂದಿದೆ. ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಪ್ರಶಾಂತ್ ಲೆನೋವೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.