ಕಾವೂರು: ದ.ಕ.ಜಿ.ಪಂ.ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮರಕಡ, ಕುಂಜತ್ತಬೈಲ್ ಇಲ್ಲಿನ ಸಮುದಾಯದತ್ತ ಶಾಲೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಜರುಗಿತು.
ಮುಖ್ಯ ಅತಿಥಿಗಳಾಗಿ ಕಾವೂರು ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ವಿಲಿಯಂ ಕುಲಾಸೋ ಸಮುದಾಯ ದತ್ತ ಶಾಲೆ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.
ನಿಕಟ ಪೂರ್ವ ಮಂಗಳೂರು ನಗರ ಪಾಲಿಕೆಯ ಸದಸ್ಯರು ಮತ್ತು ಮಾಜಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿದ್ದ ಶರತ್ ಕುಮಾರ್ ಅವರನ್ನು ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅಭಿನಂದಿಸಲಾಯಿತು.
ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ರೆಹಮಾನ್ ಖಾನ್ ಕುಂಜತ್ತಬೈಲ್, ಸಮೂಹ ಸಂಪನ್ಮೂಲ ವ್ಯಕ್ತಿ ದೀಪಿಕಾ, ಶಾಲಾ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಸಂತೋಷ್ ಕುಮಾರ್, ಮೇಲುಸ್ತುವಾರಿ ಸಮಿತಿಯ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು,
ಶಾಲಾ ಮುಖ್ಯ ಶಿಕ್ಷಕಿ ನೇತ್ರಾವತಿ ಸ್ವಾಗತಿಸಿದರು, ಸಹ ಶಿಕ್ಷಕಿ ಆಗ್ನೇಸ್ ಶಾಂತಿ ವೇಗಸ್ ಧನ್ಯವಾದ ಗೈದರು. ನಾಗಮಣಿ ಕಾರ್ಯಕ್ರಮ ನಿರೂಪಿಸಿದರು.
ಮರಕಡ ಕುಂಜತ್ತಬೈಲ್ ದ.ಕ.ಜಿ.ಪಂ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ

26
previous post