ಮೂಡಬಿದಿರೆ: ಇಲ್ಲಿನ ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ ಮಾ. 31ರಂದು ವೃದ್ಧೆಯೊಬ್ಬರ ಕತ್ತಿನಲ್ಲಿದ್ದ ಮಾಗಲ್ಯ ಸರವನ್ನು ಎಗರಸಿಕೊಂಡು ಹೋಗಿದ್ದ ಓರ್ವನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಉಡುಪಿ ಜಿಲಲ್ಲೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ನಿವಾಸಿ ಪ್ರಶಾಂತ್ ಸಾಲಿಯನ್ ಯಾನೆ ಪಚ್ಚು (34) ಆರೋಪಿ ಎಂದು ತಿಳಿದು ಬಂದಿದ್ದು, ಈತನ ವಶದಲ್ಲಿದ್ದ ವೃದ್ಧೆಯ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು, ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರವಾಹನ ಸೇರಿ 3.30 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪೆರದುಕೊಂಡಿದ್ದಾರೆ.
ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿಯ ನಿವಾಸಿ ಇಂದಿರಾ ಎಂಬವರು ಮಾ.31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ ನಡೆದುಹೋಗುತ್ತಿದ್ದ ಸಂದರ್ಭ ದ್ವಿಕ್ರವಾಹನದಲ್ಲಿ ಬಂದಿದ್ದ ಓರ್ವ ಅಪರಿಚಿತ ವ್ಯಕ್ತ ಕತ್ತಿನಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಘಿದ್ದ. ಈ ಸಂಬಂಧ ಸಂತ್ರಸ್ತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಪ್ರಸಾಂತ್ ಸಾಲ್ಯಾನ್ ಸಹಿತ ಕಳವುಗೈದಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದುವ ಬಂದಿದೆ.
ಆರೋಪಿಯ ಬಂಧನ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ಧಾರ್ಥ ಗೊಯಲ್ ಮತ್ತು ರವಿಶಂಕರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್ ಕೆ. ಅವರ ನಿರ್ದೇಶನದಂತೆ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ. ಅವರ ನೇತೃತ್ವದ ಪಿಎಸ್ಸೈಗಳಾದ ಕೃಷ್ಣಪ್ಪ ಮತ್ತು ಪ್ರತಿಭಾ ಕೆ.ಸಿ., ಎಎಸ್ಸೈ ರಾಜೇಶ್, ಎಚ್.ಸಿ. ಗಳಾದ ರಾಜೇಶ್, ಮುಹಮ್ಮದ್ ಇಕ್ಬಾಲ್ , ಪ್ರದೀಪ್ ಕುಮಾರ್ ಬಣಗರ್, ಮುಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್ ಲಮಾಣಿ ಮತ್ತು ಪಿ.ಸಿ. ವೆಂಕಟೇಶ್ ಅವರು ಭಾಗವಹಿಸಿದ್ದರು.