25
ಬೆಳ್ತಂಗಡಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಗಾಯಗೊಂಡವರನ್ನು ಗೇರುಕಟ್ಟೆಯ ನಿವಾಸಿಗಳಾದ ಕುಸುಮಾವತಿ (75), ಭಾಗ್ಯವತಿ (50) ಮತ್ತು ವೈಭವ್ (23) ಎಂದು ಗುರುತಿಸಲಾಗಿದೆ.
ಅಳದಂಗಡಿಯಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಕಾರೊಂದು, ಗುರುವಾಯನಕೆರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.