30
ಉಡುಪಿ: ಭಾನುವಾರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಣಿಪಾಲದ ಹೋಟೆಲ್ ಒಂದರ ವ್ಯವಸ್ಥಾಪಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಸಂತೆಕಟ್ಟೆ ನಿವಾಸಿ ಪ್ರವೀಣ್ ಸಾಲ್ಯಾನ್ (44) ಎಂದು ತಿಳಿದು ಬಂದಿದೆ.
ಪ್ರವೀಣ್ ಆರೂರಿನಲ್ಲಿರುವ ತನ್ನ ಪತ್ನಿಯ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಇದ್ದಕ್ಕಿದ್ದಂತೆ ಕರುವೊಂದು ಅವರ ದಾರಿಗೆ ಅಡ್ಡಲಾಗಿ ಬಂದ ಕಾರಣ ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ.
ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.