Home ದೇಶ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

by admin
0 comments

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ರಿಕ್ಕಿ ಗನ್​ ಮ್ಯಾನ್ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಸಿಕ್ಕ ಬುಲೆಟ್​ ಕಾಟ್ರಿಡ್ಜ್​ ಇಟ್ಟುಕೊಂಡು, ಈ ಬುಲೆಟನ್ನು ಯಾವ ಗನ್​ ಮೂಲಕ ಹಾರಿಸಿದ್ದಾರೆ ಎಂಬುದನ್ನು ಪರಿಶೀಲನೆ ಮಾಡಿದ್ದಾರೆ.

ಮೇಲ್ನೋಟಕ್ಕೆ ಸಿಂಗಲ್ ಬ್ಯಾರೆಲ್ ಬ್ರೀಚ್ ಲೋಡರ್ ಬಂದೂಕು ಅಥವಾ ಡಬಲ್ ಬ್ಯಾರೆಲ್ ಬ್ರೀಚ್ ಲೋಡರ್ ಬಂದೂಕು ಎಂಬುದು ಪತ್ತೆಯಾಗಿದೆ. ಇದರ ನಡುವೆ ಹೇಗೆ ಫೈರಿಂಗ್ ಮಾಡಿದ್ದರು ಎಂಬ ಕುರಿತು ತನಿಖೆ ಚುರುಕು ಗೊಂಡಿದೆ.

ರಸ್ತೆ ಪಕ್ಕದ ಲೇಔಟ್​ನ ಕಾಂಪೌಂಡ್ ಒಳಭಾಗದಿಂದ ಫೈರಿಂಗ್ ಆಗಿರಬಹುದು. ಶಾರ್ಪ್​ಶೂಟರ್ಸ್​ಗಳು, ಕತ್ತಲಲ್ಲಿ ಕಾರಿನ ಹೆಡ್​ಲೈಟ್ ಬೆಳಕಿನ ಸಹಾಯದಿಂದ ಕಾರಿನ ಮುಂಭಾಗದ ಚಾಲಕನ ಸೀಟ್​ನತ್ತ ಫೈರ್ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಫೈರ್ ಆಗಿರುವ ಗುಂಡು ಕಾರಿನಿಂದ ಹೊರಗೆ ಹೋಗಿಲ್ಲ. ಹೀಗಾಗಿ ಎಷ್ಟು ದೂರದಿಂದ ಫೈರ್ ಮಾಡಿದ್ದಾರೆ ಎಂಬುದನ್ನು ವಿಶ್ಲೇಷಿಸಲಾಗುತ್ತಿದೆ.

banner

ಒಂದೆಡೆ, ಪೊಲೀಸರು ಇಷ್ಟೆಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವಾಗಲೇ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣ ಸಂಬಂಧ ರಿಕ್ಕಿ ರೈ ಗನ್​ ಮ್ಯಾನ್ ಮನ್ನಪ್ಪ ವಿಠ್ಠಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಡದಿ ಠಾಣೆ ಪೊಲೀಸರು, ಮನ್ನಪ್ಪ ವಿಠ್ಠಲ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸ್ವಯಂ ದಾಳಿ​ ಮಾಡಿಸಿಕೊಂಡರಾ ರಿಕ್ಕಿ ರೈ ಎಂಬ ಅನುಮಾನ ಪೊಲೀಸರಿಗೂ ಮೂಡಿದೆ. ರಿಕ್ಕಿ ರೈಗೆ ಮೂವರು ಗನ್​ ಮ್ಯಾನ್​ಗಳಿದ್ದು, ತನಿಖೆ ವೇಳೆ ಮೂವರು ವಿಭಿನ್ನ ಹೇಳಿಕೆ ನೀಡಿದ್ದಾರೆಂದು ಪೊಲೀಸ್​ ಮೂಲಗಳು ತಿಳಿಸಿವೆ. ಹೀಗಾಗಿ ರಿಕ್ಕಿ ರೈ ಗನ್​ಮ್ಯಾನ್​ಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ ಎನ್ನಲಾಗಿದೆ. ಹೀಗಾಗಿ, ರಿಕ್ಕಿ ರೈ ಮನೇಲಿಯಲ್ಲಿನ ಗನ್​ ಹಾಗೂ ಬುಲೆಟ್​ಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ತನಿಖಾಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.