16
ಬಂಟ್ವಾಳ: ಬಿ ಕಸಬಾ ಗ್ರಾಮದ ನೇರಂಬೋಳು ಎಂಬಲ್ಲಿ ಪೈಟಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ಮನೆಯ ಸೀಟೌಟಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೃತ ಯುವಕನನ್ನು ಇಲ್ಲಿನ ನಿವಾಸಿ ದಿ. ದಯಾನಂದ ಪೂಜಾರಿ ಅವರ ಪುತ್ರ ದೀಕ್ಷಿತ್ ಎಂದು ಗುರುತಿಸಲಾಗಿದೆ..
ಅವಿವಾಹಿತನಾಗಿರುವ ದೀಕ್ಷಿತ್ ಸ್ಥಳೀಯವಾಗಿ ಪೈಂಟಿಂಗ್ ಕೆಲಸ ಮಾಡುತ್ತಿದ್ದು, ಮಂಗಳವಾರ ಮಧ್ಯಾಹ್ನ ಮನೆಯ ಸೀಟೌಟಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.