ಮುದ್ದೇಬಿಹಾಳ: ನಾಲತವಾಡ ಗ್ರಾಮದ ಆರೇಶಂಕರ ಕ್ರಾಸ್ ಬಳಿ ಬೈಕಿಗೆ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಮೃತ ಯುವಕನನ್ಬು ನಾಲತವಾಡ ಪಟ್ಟಣದ 5ನೇ ವಾರ್ಡಿನ ನಿವಾಸಿ ಸಂಗಪ್ಪ ಬಸಪ್ಪ ಗೌಡೂರ (28) ಎಂದು ಗುರುತಿಸಲಾಗಿದೆ.
ಸ್ಥಳೀಯ ಪ.ಪಂಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಪರಿಚಯದ ಮಹಿಳೆಯೊಂದಿಗೆ ಬೈಕ್‌ನಲ್ಲಿ ಆರೇಶಂಕರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಆರೇಶಂಕರ ಕ್ರಾಸ್ ಬಳಿ ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಬೈಕ್‌ಗೆ ಡಿಕ್ಕಿಯಾಗಿ ಸಂಗಪ್ಪ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೈಕ್‌ನಲ್ಲಿ ಜೊತೆಗಿದ್ದ ಮಹಿಳೆಗೆ ಸ್ವಲ್ಲ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.