37
ಕಾಸರಗೋಡು: ಅಪ್ರಾಪ್ತನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಉಪ್ಪಳ ಆರ್‌ಎಸ್ ರೋಡ್‌ನ ರುಕ್ಸಾನ ಮಂಜಿಲ್‌ನ ಶೇಕ್ ಮೊಯ್ದಿನ್ (40) ಎಂದು ತಿಳಿದು ಬಂದಿದೆ.
ಹತ್ತು ವರ್ಷದ ಬಾಲಕನನ್ನು ಅಂಗಡಿಗೆ ಕರೆದೊಯ್ದು ಕಿರುಕುಳ ನೀಡಿದ್ದಾನೆ. ಘಟನಾ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಗೆ ಕಾಸರಗೋಡು ಜೈಲಿನಲ್ಲಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
1 comment
[…] […]