Home ಕರಾವಳಿ ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭಿಣಿಯನ್ನಾಗಿಸಿದ ಯುವಕ

ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭಿಣಿಯನ್ನಾಗಿಸಿದ ಯುವಕ

by admin
0 comments

ಬೆಳ್ತಂಗಡಿ: ವೇಣೂರು ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ವರದಿಯಾಗಿದೆ.

ಘಟನಾ ಸಂಬಂಧ ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅತ್ಯಾಚಾರವೆಸಗಿದ ಆರೋಪಿ ಶಿರ್ಲಾಲು ಗ್ರಾಮದ ನಿವಾಸಿ ಸನತ್ (28) ಎಂದು ತಿಳಿದು ಬಂದಿದೆ.

ಆರೋಪಿ ಸನತ್ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು ಬಾಲಕಿಯ ತಂದೆಯೊಂದಿಗೆ ಆಗಾಗ ಮನೆಗೆ ಬರುತ್ತಿದ್ದ. ಈ ಸಂದರ್ಭ ಅಪ್ರಾಪ್ತ ಬಾಲಕಿ ಜೊತೆ ಸಲುಗೆಯಿಂದ ಇದ್ದ ಎಂದು ಹೇಳಲಾಗಿದೆ

banner

ಬಾಲಕಿಯ ಜನ್ಮದಿನದ ಕಾರ್ಯಕ್ರಮಕ್ಕೆ ಬಂದು ಆರೋಪಿ ರಾತ್ರಿ ಮನೆಯಲ್ಲಿ ಉಳಿದುಕೊಂಡಿದ್ದು, ರಾತ್ರಿ ವೇಳೆ ಬಾಲಕಿ ಮಲಗಿದ್ದ ಕೋಣೆಗೆ ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಬಾಲಕಿ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ಆದಾದ ಬಳಿಕವೂ ಆಗಾಗ ರಾತ್ರಿ ವೇಳೆಯಲ್ಲಿ ಬಂದು ಲೈಂಗಿಕ ದೌರ್ಜನ್ಯವೆಸಗಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ವಿರುದ್ದ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.