Home News ಎಂಡಿಎಂಎ ಸಹಿತ ಯುವಕನ ಬಂಧನ

ಎಂಡಿಎಂಎ ಸಹಿತ ಯುವಕನ ಬಂಧನ

by admin
0 comments

ಕಾಸರಗೋಡು: ಮಾದಕ ವಸ್ತು ಹೊಂದಿದ್ದ ಆರೋಪದಲ್ಲಿ ಯುವಕನೋರ್ವನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಬದಿಯಡ್ಕ ನಾರಾಂಪಾಡಿಯ ಮುಹಮ್ಮದ್ ರಫೀಕ್(23) ಎಂದು ತಿಳಿದು ಬಂದಿದೆ.

ಈತನ ಮನೆಯಿಂದ 107 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಖಚಿತ ಮಾಹಿತಿಯ ಆಧಾರದಲ್ಲಿ ರಫೀಕ್ ಮನೆಗೆ ದಾಳಿ ನಡೆಸಿದಾಗ ಆತನ ಕೋಣೆಯ ಮಂಚದಡಿಯಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಎಂಡಿಎಂಎ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

banner

ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದಿದ್ದಾಗಿ ವಿಚಾರಣೆ ವೇಳೆ ಆತ ಬಾಯಿಬಿಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.