20
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ಅಂಬಿಕಾ ಟಿಂಬರ್ ಬಳಿ ಉಡುಪಿಯಿಂದ ಪಡುಬಿದ್ರಿಗೆ ತೆರಳುತ್ತಿದ್ದ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರ ಪ್ರಜ್ವಲ್ ಎಂದು ತಿಳಿದು ಬಂದಿದೆ.
ಉಡುಪಿಯಿಂದ ಪಡುಬಿದ್ರಿಗೆ ಬರುತ್ತಿದ್ದ ಬೈಕ್ ಸವಾರ ಪ್ರಜ್ವಲ್ ದಂಡತೀರ್ಥ ಬಳಿಯ ಅಂಬಿಕಾ ಟಿಂಬರ್ ಎದುರು ಬೈಕ್ ಸ್ಕಿಡ್ ಆಗಿ ರಸ್ತೆಯ ಬಲಬದಿಯ ಡಿವೈಡರ್‌ಗೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಪ್ರಜ್ವಲ್ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.