ಮೂಲ್ಕಿ: ಕಂಟೈನರ್ ಲಾರಿಯೊಂದು ಬೈಕ್‌ಗೆ ಡಿಕ್ಕಿಯಾಗಿ ಸಹಸವಾರ ಮೃತಪಟ್ಟಿದ್ದು, ಸವಾರ ಗಾಯಗೊಂಡ ಘಟನೆ ಹಳೆಯಂಗಡಿ ಪಕ್ಷಿಕೆರೆ ಜಂಕ್ಷನ್ ಬಳಿ ಭಾನುವಾರ ನಡೆದಿದೆ.
ಮೃತಪಟ್ಟ ಸಹಸವಾರ ಸುಗಾಂದ್ (21) ಎಂದು ತಿಳಿದು ಬಂದಿದೆ.
ಲಾರಿ ಮತ್ತು ಬೈಕ್‌ಗಳೆರಡೂ ಮುಕ್ಕ ಕಡೆಯಿಂದ ಮೂಲ್ಕಿಯತ್ತ ಬರುತ್ತಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರಿಬ್ಬರನ್ನೂ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಹಿಂಬದಿ ಸವಾರ ಸುಗಾಂದ್ (21) ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು.
ಬೈಕ್ ಚಾಲನೆ ಮಾಡುತ್ತಿದ್ದ ಇನ್ಸಾಫ್ (21) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರೂ ಮೂಲ್ಕಿ ಸೈಂಟ್ ಆ್ಯನ್ಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕೇರಳ ಮೂಲದವರಾಗಿದ್ದಾರೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.