Home News ಮಂಗಳೂರು: ಸಿಐಎಸ್‌ಎಫ್‌ನ ಎಎಸ್‌ಐ ರೈಲಿನಲ್ಲಿ ಮೃತ್ಯು

ಮಂಗಳೂರು: ಸಿಐಎಸ್‌ಎಫ್‌ನ ಎಎಸ್‌ಐ ರೈಲಿನಲ್ಲಿ ಮೃತ್ಯು

by admin
0 comments

ಮಂಗಳೂರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್‌) ಎಎಸ್‌ಐ ಓರ್ವರು ರೈಲಿನಲ್ಲಿ ಅಸ್ವಾಭಾವಿಕವಾಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಮೃತಪಟ್ಟ ವ್ಯಕ್ತಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ನಿವಾಸಿ ಎ. ರಮಣೈ (45) ಎಂದು ತಿಳಿದು ಬಂದಿದೆ.

ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದಾಗ ಮಧ್ಯಾಹ್ನ ಅಸ್ವಸ್ಥಗೊಂಡರು. ಆರ್‌ಪಿಎಫ್ ಇನ್‌ಸ್ಪೆಕ್ಟರ್ ಮನೋಜ್ ಕುಮಾ‌ರ್ ಯಾದವ್ ಮತ್ತು ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.