Home News ಸಾಹಿತಿ ಬಾನು ಮುಷ್ತಾಕ್‍ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಘಟಕದಿಂದ ಅಭಿನಂದನೆ

ಸಾಹಿತಿ ಬಾನು ಮುಷ್ತಾಕ್‍ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಘಟಕದಿಂದ ಅಭಿನಂದನೆ

by admin
0 comments

ಶಿವಮೊಗ್ಗಃ ಹಸೀನಾ ಮತ್ತು ಇತರ ಕತೆಗಳು ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‍ಗೆ ಅಂತರಾಷ್ಟ್ರೀಯ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಕತೆಗಾರ್ತಿ, ಪತ್ರಕರ್ತೆ ಬಾನು ಮುಸ್ತಾಕ್ ಅವರನ್ನು ಕರ್ನಾಟಕ ಕಾರ್ಯನಿರತ
ಪತ್ರಕರ್ತರ ಸಂಘದ ಶಿವಮೊಗ್ಗ ಘಟಕ ಅಭಿನಂದಿಸಿದ

ಈ ಸಂಬಂಧ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್, ರಾಜ್ಯ ಸಮಿತಿ ನಿರ್ದೇಶಕ
ಎನ್. ರವಿಕುಮಾರ್‍ರವರು ಅವರು, ಇದು ಕನ್ನಡ ಮತ್ತು ರಾಜ್ಯದ ಪ್ರತೀ ಕನ್ನಡಿಗರ ಹೆಮ್ಮೆ. ಇದು ಕರ್ನಾಟಕ ಸಂಭ್ರಮಿಸುವ ಸಮಯ. ಮುಸ್ತಾಕ್‍ ಅವರು ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ
ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿದ್ದಾರೆ. ಲಂಕೇಶ್ ತ್ರಿಕೆ ಮೂಲಕ ಪತ್ರಕರ್ತೆಯಾಗಿಯೂ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ
ಮಟ್ಟದಲ್ಲಿ ಹಾರಿಸಿ ಗೌರವ ತಂದುಕೊಟ್ಟಿದ್ದಾರೆ ಎಂದಿದ್ದಾರೆ.

ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಇದೇ ಅನುವಾದಿತ ಕೃತಿಗೆ ಪೆನ್ ಟ್ರಾನ್ಸ್‍ಲೇಟ್ಸ್ ಪ್ರಶಸ್ತಿಯೂ ದೊರೆತಿತ್ತು ಎಂದು ಸ್ಮರಿಸಿದ್ದಾರೆ. ಬೂಕರ್ ಪ್ರಶಸ್ತಿಗೆ
ಭಾಜನವಾಗಿರುವ ಬಾನು ಮುಸ್ತಾಕ್‍ ಅವರ ಕೃತಿಯನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರನ್ನೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಘಟಕ ಅಭಿನಂದಿಸುತ್ತದೆ ಎಂದು ತಿಳಿಸಿದ್ದಾರೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.