12
ಕಾಪು: ರಸ್ತೆ ದಾಟಲೆಂದು ರಸ್ತೆ ವಿಭಾಜಕದ ಮೇಲೆ ನಿಂತಿದ್ದ ವ್ಯಕ್ತಿಯೋರ್ವನಿಗೆ ಲಾರಿ ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ ಎ. ಸುವರ್ಣ (43) ಎಂದು ತಿಳಿದು ಬಂದಿದೆ.
ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿ ಧನಂಜಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ರಸ್ತೆಗೆ ಬಿದ್ದ ಅವರ ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ
ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದು, ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.