Home News ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಪೋಸ್ಟ್; 6ಮಂದಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಪೋಸ್ಟ್; 6ಮಂದಿಯ ಬಂಧನ

by admin
0 comments

ಮಂಗಳೂರು: ಪ್ರಚೋದನಾಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಆರೋಪದಲ್ಲಿ 6ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಹೆಜಮಾಡಿಯ ಅಸ್ಲಾಂ (23), ಕಾಟಿಪಳ್ಳದ ಚೇತನ್ (20), ಹಳೆಯಂಗಡಿ ನಿತಿನ್ ಅಡಪ (23), ಫರಂಗಿಪೇಟೆಯ ರಿಯಾಝ್ ಇಬ್ರಾಹೀಂ (30), ಕಸಬಾ ಬೆಂಗ್ರೆಯ ಜಮಾಲ್ ಝಕೀರ್(21) ಮತ್ತು ಕೊಳವೈಲ್‌ನ ಗುರುಪ್ರಸಾದ್ ಎಂದು ತಿಳಿದು ಬಂದಿದೆ.

ಅಸ್ಲಾಂ ಸೌದಿ ಅರೇಬಿಯಾದಿಂದ team_jokerzzz._ ಎಂಬ ಇನ್‌ಸ್ಟಾಗ್ರಾಂ ಮೂಲಕ ಪ್ರಚೋದನಾಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ.

ಚೇತನ್ ಎಂಬಾತ ಮುಸ್ಲಿಂ ಹೆಸರಿನ ಸಿಮ್ ಕಾರ್ಡನ್ನು ಬಳಸಿಕೊಂಡು team_karna_surathkal ಇನ್‌ ಸ್ಟಾಗ್ರಾಂ ಪೇಜ್‌ ನ್ನು ತೆರೆದಿದ್ದು, ಈ ಪೇಜ್‌ನಲ್ಲಿ ಚೆನ್ನಪ್ಪ ಯಾನೆ ಮುತ್ತು ಸುರತ್ಕಲ್ ಎಂಬಾತ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ.

banner

ರಿಯಾಝ್ ಇಬಾಹೀಂ ಎಂಬಾತನು ಸೌದಿ ಅರೇಬಿಯಾದಿಂದ Beary_royal_nawab ಎಂಬ ಇನ್‌ ಸ್ಟಾಗ್ರಾಮ್ ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ.

ಆರೋಪಿ ಜಮಾಲ್ ಝಾಕೀರ್ Troll_bengare_ro_makka ಇನ್‌ ಸ್ಟಾಗ್ರಾಮ್ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ.

ಗುರು ಪ್ರಸಾದ್ ಎಂಬಾತ Guru dprasad Haleyangadi ಎಂಬ ಫೇಸ್ ಬುಕ್ ಖಾತೆಯ ಮುಖಾಂತರ ಸಂದೇಶಗಳನ್ನು ಹರಿಬಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್ ಮತ್ತು ರವಿಶಂಕರ್ ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡ ತನಿಖೆ ಮುಂದುವರಿಸಿದೆ ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.