15
ಬೆಂಗಳೂರು: ಆರ್ಸಿಬಿ ತಂಡ ಐಪಿಎಲ್ ನಲ್ಲಿ ಗೆದ್ದ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ಕಾಲ್ತುಳಿತದಿಂದಾಗಿ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿದ್ದು, ಇದರಲ್ಲಿ ಮಂಗಳೂರು ಮೂಲದ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತಪಟ್ಟವರು ಉಪ್ಪಿನಂಗಡಿಯ ಚಿನ್ಮಯಿ ಶೆಟ್ಟಿ (19) ಮತ್ತು ಮಂಗಳೂರಿನ ಅಕ್ಷತಾ ಎಂದು ತಿಳಿದು ಬಂದಿದೆ.
ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಮಧ್ಯರಾತ್ರಿಯೇ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ ಎಂದು ತಿಳಿದು ಬಂದಿದೆ.