ಶಿವಮೊಗ್ಗ: ಚಲಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಾರೊಂದು ಹಿಂದಿನಿಂದ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಡಿರುವ ಘಟನೆ ಬುಧವಾರ ಸಂಭವಿಸಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಎಂಆರ್‌ಎಸ್‌ನಿಂದ ಶಿವಮೊಗ್ಗ ಸಿಟಿ ಕಡೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಈ ಸಂದರ್ಭ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಬಸ್ಸಿನ ಹಿಂಭಾಗಕ್ಕೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ರಸ್ತೆ ಮಧ್ಯೆ ನಿಂತ್ತಿದ್ದ ಕಾರನ್ನು ಸ್ಥಳೀಯರು ಸೇರಿ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಈ ಕುರಿತು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.