ಬೆಂಗಳೂರು: ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಪದೇಪದೆ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿಯ ವರ್ತನೆಗೆ ಬೇಸತ್ತ ಪತಿಯೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಆತ್ಮಹ*ತ್ಯೆಗೆ ಶರಣಾದ ವ್ಯಕ್ತಿ ಕೆ.ಪಿ.ಅಗ್ರಹಾರದ 12ನೇ ಮುಖ್ಯರಸ್ತೆ ನಿವಾಸಿ ಗೋವರ್ಧನ್ (37) ಎಂದು ತಿಳಿದು ಬಂದಿದೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೋವರ್ಧನ್, 7 ವರ್ಷಗಳ ಹಿಂದೆ ಪ್ರಿಯಾ ಎಂಬವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಈ ಮಧ್ಯೆ ಪ್ರಿಯಾ, ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು, ಹೇಳದೆ, ಕೇಳದೆ ಮನೆ ಬಿಟ್ಟು ಹೋಗುತ್ತಿದ್ದರು. ತಿಂಗಳ ಹಿಂದೆಯೂ ಮನೆ ಬಿಟ್ಟು ಹೋಗಿದ್ದರು. ಅದರಿಂದ ಬೇಸತ್ತ ಗೋವರ್ಧನ್, ಸೋಮವಾರ ಸಂಜೆ ಮನೆಯಲ್ಲೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪತ್ನಿ ಮನೆ ಬಿಟ್ಟು ಹೋಗುತ್ತಿದ್ದರಿಂದ ಗೋವರ್ಧನ್ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ ಎಂದು ಅವರ ಪೋಷಕರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.