ನವದೆಹಲಿ: ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ವರದಿಯಾಗಿದೆ.
ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ ಮೂವರು ಮಹಡಿಯಿಂದ ಹಾರಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗಾಯಾಳುಗಳ ವಿವರಗಳು ಹಾಗೂ ಘಟನೆಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡದ ಬಗ್ಗೆ ಬೆಳಗ್ಗೆ 10 ಗಂಟೆಯ ಸುಮಾರಿಗೆ ಕರೆ ಬಂತು. ತಕ್ಷಣವೇ ಎಂಟು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬುಲೆನ್ಸ್ ಘಟನಾ ಸ್ಥಳದಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.