ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೆಯಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕೃಷ್ಣಾವರಂ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಡಿವೈಡರ್ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೃಷ್ಣಾವರಂ ಗ್ರಾಮದ ಆಕಾಶ್ (33), ಜಾನ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಅಪ್ಪು ಅಲಿಯಾಸ್ ಭಾಸ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ತಮಿಳರಸನ್, ನಾಗರಾಜು ಎಂಬವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಈ ಕುರಿತು ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.