10
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಐರೊಡಿ ಪಂಚಾಯತ್ ಎದುರುಗಡೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಪಾದಚಾರಿ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.
ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಸುಮಾರು 35 ವರ್ಷದ ಯುವಕ ಎಂದು ಗುರುತಿಸಲಾಗಿದೆ.
ವ್ಯಕ್ತಿಯ ತಲೆಯ ಮೇಲೆ ಅಪರಿಚಿತ ವಾಹನ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ವ್ಯಕ್ತಿಯ ಗುರುತು ಪತ್ತೆ ಹಾಗೂ ವ್ಯಕ್ತಿಯ ಮೇಲೆ ಹರಿದ ವಾಹನದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬ್ರಹ್ಮಾವರ ಶವಗಾರಕ್ಕೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.