12
ಕಾಸರಗೋಡು: ಮಂಜೇಶ್ವರದ ಹೊಸಬೆಟ್ಟು ಎಂಬಲ್ಲಿ ಕಾರೊಂದು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟವರು ವಾಮಂಜೂರು ಕಜೆ ನಿವಾಸಿ ಮುಹಮ್ಮದ್ ಸಾದಿಕ್(40) ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡಿದ್ದ ಸಾದಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.