14
ಕಲಬುರಗಿ: ಮಹಿಳೆಯೊಬ್ಬಳನ್ನು ಭೀಕರವಾಗಿ ಕೊಲೆಗೈದ ಘಟನೆ ನಗರದ ಶಹಬಜಾರ್ ಬಡಾವಣೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಕೊ*ಲೆಯಾದ ಮಹಿಳೆ ಜಿಲ್ಲೆಯ ಕಲ್ಲಹಂಗರಗಾ ಗ್ರಾಮ ಮೂಲದ ಶಹಾಬಜಾರ್ ಬಡಾವಣೆ ನಿವಾಸಿ ರೂಪಾ (32) ಎಂದು ತಿಳಿದು ಬಂದಿದೆ.
ಹೋಟೆಲ್ ವೊಂದರಲ್ಲಿ ಸಮೋಸ ಮಾಡಲು ತೆರಳುವಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಅನೈತಿಕ ಸಂಬಂಧದ ಹಿನ್ನಲೆ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಎಸಿಪಿ ಚಂದ್ರಶೇಖರ್ ಸೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.