ಉಡುಪಿ: ಇಲ್ಲಿನ ಮೂಡನಿಡಂಬೂರು ಗ್ರಾಮದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ ಶಂಭುಲಿಂಗ್ ಮಡಿವಾಳ (37) ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿದ್ದಾರೆ. ಆರೋಪಿಯು ಯಾವುದೇ ಪರವಾನಗಿ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ವೈಯಕ್ತಿಕ ಲಾಭಕ್ಕಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ದಾಳಿ ವೇಳೆ, ಪೊಲೀಸರು ಆರೋಪಿಯಿಂದ 2,600 ರೂ. ಮೌಲ್ಯದ ವಿವಿಧ ಬ್ರಾಂಡ್‌ಗಳ ಮದ್ಯದ ಪ್ಯಾಕೆಟ್‌ಗಳು ಮತ್ತು 3,960 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಆರೋಪಿ ಶಂಭುಲಿಂಗ್‌ನನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.