Home News ದ.ಕ, ಉಡುಪಿಯಲ್ಲಿ ಜೂನ್ 14 ರವರೆಗೆ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

ದ.ಕ, ಉಡುಪಿಯಲ್ಲಿ ಜೂನ್ 14 ರವರೆಗೆ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

by admin
0 comments

ಬೆಂಗಳೂರು: ರಾಜ್ಯದಲ್ಲಿ ಸ್ವಲ್ಪ ಸಮಯದ ವಿರಾಮದ ಬಳಿಕ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಜೂನ್ 14 ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳಲ್ಲಿ ಜೂನ್ 14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ (ದ.ಕ.), ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೊಷಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಜಯಪುರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

banner

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮಂಗಳವಾರ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಔರಾದ್, ಬೀದರ್, ಬರಗೂರು, ಅಣ್ಣಿಗೆರೆ, ಹುಮನಾಬಾದ್, ಚಿತ್ತಾಪುರ, ಚಿಟಗೊಪ್ಪ, ಸಿರಾ, ಬೆಂಗಳೂರು, ದಾವಣಗೆರೆ, ಮದ್ದೂರು, ಗುಬ್ಬಿ, ಜಗಳೂರು, ಹಿರಿಯೂರು, ಇಂಡಿ, ಭಾಲ್ಕಿ, ಸೇಡಂ, ಕಾರ್ಕಳ, ಮಂಗಳೂರು, ಬಂಟ್ವಾಳ, ಕುಂದಾಪುರ ಮತ್ತು ಜೆಕೆವಿಕೆ ಸೇರಿದಂತೆ ಗಮನಾರ್ಹ ಮಳೆಯಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles