11
ಬೆಂಗಳೂರು: ಸಿಸಿಬಿ ಹಾಗೂ ಬೆಂಗಳೂರಿನ ಚಿಕ್ಕಜಾಲ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದಾರೆ.
ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ಶುಕ್ರವಾರ ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. ಬಂಧಿತ ಪ್ರಿನ್ಸಸ್ ನಿಂದ 10 ಕೋಟಿ ರೂ. ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಚಿಕ್ಕಜಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.