ಅಹಮದಾಬಾದ್: ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂದು ವರದಿಯಾಗಿದೆ.
ಗುರುವಾರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿತ್ತು.
ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಒಂದು ಬ್ಲ್ಯಾಕ್ ಬಾಕ್ಸ್ ಅನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದ್ದು, ಎರಡನೇ ಬ್ಲ್ಯಾಕ್ ಬಾಕ್ಸ್ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್‌ಗಾಗಿ (ಡಿವಿಆರ್) ಶೋಧ ಕಾರ್ಯ ಮುಂದುವರೆದಿದೆ ಎಂದು ವರದಿ ತಿಳಿಸಿದೆ.