ಮಂಗಳೂರು: ಮೇ 1ರಂದು ಬಜ್ಪೆ ಸಮೀಪದ ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು ಇದೀಗ ಅಧಿಕಾರಿಗಳು ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ಶನಿವಾರ ಬೆಂಗಳೂರಿನಿಂದ ಆಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದೆ ಎಂದು ತಿಳಿದು ಬಂದಿದೆ.
ಮೇ.1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ. ಇನ್ನು ರಾಜಕೀಯ ಮತ್ತು ಸಾರ್ವಜನಿಕ ವಲಯದಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ಎನ್‌ಐಎಗೆ ವಹಿಸಿತ್ತು.