Home News ಅಹಮದಾಬಾದ್ ವಿಮಾನ ದುರಂತ: 87 ಶವಗಳ ಗುರುತು ಪತ್ತೆ; 47 ಮೃತದೇಹ ಹಸ್ತಾಂತರ

ಅಹಮದಾಬಾದ್ ವಿಮಾನ ದುರಂತ: 87 ಶವಗಳ ಗುರುತು ಪತ್ತೆ; 47 ಮೃತದೇಹ ಹಸ್ತಾಂತರ

by admin
0 comments

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಕಿ ಡಿಎನ್‌ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದ್ದು, 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ ಮಾಡಲಾದ ಸಂತ್ರಸ್ತರು ರಾಜಸ್ಥಾನ ಮತ್ತು ಗುಜರಾತ್‌ನ ವಿವಿಧ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸಂಪೂರ್ಣ ಸುಟ್ಟು ಕರಕಲಾಗಿವೆ ಮತ್ತು ರುಂಡ-ಮುಂಡ, ಕೈ-ಕಾಲುಗಳು ಬೇರೆ ಬೇರೆಯಾಗಿ ಛಿದ್ರವಾಗಿದೆ. ಆದ್ದರಿಂದ ಅಧಿಕಾರಿಗಳು ಡಿಎನ್‌ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ. ಮೃತಪಟ್ಟವರ ಸಂಬಂಧಿಕರು ಸಿವಿಲ್ ಆಸ್ಪತ್ರೆಗೆ ಬಂದು ತಮ್ಮ ಡಿಎನ್‌ಎ ನಮೂನೆಗಳನ್ನು ನೀಡಿ ಆಸ್ಪತ್ರೆಯ ಆವರಣದಲ್ಲಿ ನಾಲ್ಕು ದಿನದಿಂದ ಕಾಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.