ಲಕ್ನೋ: ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಸೌದಿಯಾ ಏರ್‌ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ.
ವಿಮಾನ ಚಕ್ರಗಳು ರನ್‌ವೇಗೆ ಇಳಿಯುತ್ತಿದ್ದಂತೆ ಟಯರ್‌ನಿಂದ ಬೆಂಕಿ ಕಿಡಿಗಳು ಚಿಮ್ಮಿದ್ದು, ದಟ್ಟ ಹೊಗೆ ಹೊಮ್ಮಿದೆ. ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸದೇ ನೂರಾರು ಯಾತ್ರಿಕರು, ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಕೂಡ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ.
SV3112 ಸಂಖ್ಯೆಯ ವಿಮಾನ ಶನಿವಾರ ರಾತ್ರಿ ಜೆಡ್ಡಾದಿಂದ 250 ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿತ್ತು, ಸಿಬ್ಬಂದಿಗಳೂ ಇದ್ದರು. ಹಜ್‌ಗೆ ಹೊರಟಿದ್ದ ವೇಳೆ ಬೆಳಗ್ಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿ ತಿಳಿಸಿದೆ.