7
ನೆಲಮಂಗಲ: ನೆಲಮಂಗಲದ ಕುಣಿಗಲ್ ಬೈಪಾಸ್ನಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ನೃತ್ಯಗಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ತಿಳಿದು ಬಂದಿದೆ.
ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ನೃತ್ಯಗಾರ್ತಿ ಆಗಿದ್ದಾರೆ. ಇಬ್ಬರು ಮದುವೆ ಕಾರ್ಯಕ್ರಮ ಒಂದನ್ನು ಮುಗಿಸಿಕೊಂಡು ಕುಣಿಗಲ್ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.