Home News ಬಂಟ್ವಾಳ: ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

by admin
0 comments

ಬಂಟ್ವಾಳ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಸೋಮವಾರ ಬಂಟ್ವಾಳ ತಾಲೂಕಿನ ಅಮ್ಮುಂಜೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಮೃತಪಟ್ಟ ಯುವಕನನ್ನು ಅಮ್ಮುಂಜೆ ನಿವಾಸಿ ಸಾಗರ್ (28) ಎಂದು ಗುರುತಿಸಲಾಗಿದೆ.

ಪೈಂಟಿಗ್ ಕೆಲಸ ಮಾಡುತ್ತಿದ್ದ ಸಾಗರ್, ಜೂನ್ 14 ರಂದು ತನ್ನ ತಾಯಿಯೊಂದಿಗೆ ಬಿ.ಸಿ. ರೋಡ್‌ಗೆ ಹೋಗಿ ಬಂದಿದ್ದ. ಸಂಜೆ 5 ಗಂಟೆಯ ಸುಮಾರಿಗೆ ವಾಪಸ್ ಬರುವಾಗ, ಅವರು ಬೆಂಜನಪದವು ಮೂರು ಮಾರ್ಗ ಬಳಿ ಆಟೋದಿಂದ ಇಳಿದು ಹೋದವನು ಮನೆಗೆ ಹಿಂದಿರುಗಿರಲಿಲ್ಲ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಸೋಮವಾರ, ವಿದ್ಯಾ ನಗರ ಹೈಸ್ಕೂಲ್ ರಸ್ತೆ ಬಳಿಯ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿರಬಹುದು ಅಥವಾ ಅಮಲು ಪದಾರ್ಥ ಸೇವಿಸಿಯೋ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

banner

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.