12
ಕಾರ್ಕಳ: ಕಳೆದ ವರ್ಷ ಅ. 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಇನ್ನೋರ್ವ ಆರೋಪಿ ದಿಲೀಪ್ ಹೆಗ್ಡೆ ಕೂಡ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ತಿಳಿದು ಬಂದಿದೆ.
ಅಜೆಕಾರು ಬಾಲಕೃಷ್ಣ ಪೂಜಾರಿಯನ್ನು ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಅ. 25 ರಂದು ಅಜೆಕಾರು ಠಾಣಾ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು.