Home News ಆಟವಾಡುತ್ತಿದ್ದ 8 ವರ್ಷದ ಬಾಲಕಿ ನೀರಿನ ಹೊಂಡಕ್ಕೆ ಬಿದ್ದು ಮೃತ್ಯು

ಆಟವಾಡುತ್ತಿದ್ದ 8 ವರ್ಷದ ಬಾಲಕಿ ನೀರಿನ ಹೊಂಡಕ್ಕೆ ಬಿದ್ದು ಮೃತ್ಯು

by admin
0 comments

ಕಾಸರಗೋಡು: ಬಾಡೂರು ಸಮೀಪದ ಓಣಿಬಾಗಿಲು ಎಂಬಲ್ಲಿ ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿ ಸಮೀಪದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ಮೃತ ಬಾಲಕಿ ಬಾಡೂರು ಪದವು ಎ. ಎಲ್. ಪಿ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ, ಓಣಿಬಾಗಿಲುವಿನ ಮುಹಮ್ಮದ್-ಖದೀಜತ್ ಕುಬ್ರಾ ದಂಪತಿ ಪುತ್ರಿ ಫಾತಿಮಾ ಹಿಬಾ ಎಂದು ತಿಳಿದು ಬಂದಿದೆ.

ಸೋಮವಾರ ಸಂಜೆ ಸಹಪಾಠಿಗಳ ಜೊತೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದು ಈ ಘಟನೆ ನಡೆದಿದೆ. ಜೊತೆಗಿದ್ದ ಮಕ್ಕಳ ಬೊಬ್ಬೆ ಕೇಳಿ ಮನೆಯವರು ಹಾಗೂ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ ಬಾಲಕಿಯನ್ನು ಮೇಲಕ್ಕೆತ್ತಿ ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಬಾಲಕಿಯ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.