10
ಕಡಬ: ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರಿಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಮೃತ ಮಹಿಳೆ ದೋಳಾಡಿ ನಿವಾಸಿ ಪುರಂದರ ಎಂಬವರ ಪತ್ನಿ ಜಲಜಾಕ್ಷಿ(38) ಎಂದು ತಿಳಿದು ಬಂದಿದೆ.
ನೀರಿನ ಪಂಪ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಆದರೆ ಅವರು ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಡಬ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.