10
ಉಡುಪಿ: ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಹೂಗುಚ್ಚವನ್ನು ನೀಡುವ ಮೂಲಕ ತಮ್ಮ ಅಧಿಕಾರವನ್ನು ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರಿಗೆ ಹಸ್ತಾಂತರಿಸಿದರು.
ಸ್ವರೂಪ ಟಿ.ಕೆ ಅವರು ಈ ಹಿಂದೆ ಬೆಂಗಳೂರಿನ ಆರ್.ಡಿ.ಪಿ.ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು