Home News ಯಾವುದೇ ಕಾರಣಕ್ಕೂ ಶರಣಾಗುವ ಯಾವುದೇ ಪ್ರಶ್ನೆಯೇ ಇಲ್ಲ: ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಶರಣಾಗುವ ಯಾವುದೇ ಪ್ರಶ್ನೆಯೇ ಇಲ್ಲ: ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಸ್ಪಷ್ಟನೆ

by admin
0 comments

ಟೆಹರಾನ್: ಇರಾನ್ ಯಾವುದೇ ಕಾರಣಕ್ಕೂ ಶರಣಾಗುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಹೇಳಿದ್ದಾರೆ.

ಇರಾನ್‌ ಶಾಂತಿಯ ಜೊತೆ ದೃಢವಾಗಿ ನಿಲ್ಲುವಂತೆ ಯುದ್ಧದ ಜೊತೆಯೂ ದೃಢವಾಗಿ ನಿಲ್ಲುತ್ತದೆ. ನಮ್ಮ ರಾಷ್ಟ್ರ ಯಾರಿಗೂ ಶರಣಾಗುವುದಿಲ್ಲ ಎಂದು ಅವರು ದೂರದರ್ಶನದ ಸಂದೇಶದಲ್ಲಿ ಹೇಳಿದ್ದಾರೆ ಎಂದು ʼತಸ್ನಿಮ್ʼ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇರಾನ್ ಮತ್ತು ಅದರ ಇತಿಹಾಸವನ್ನು ತಿಳಿದಿರುವವರು ಇರಾನಿಯನ್ನರನ್ನು ಬೆದರಿಸುವ ಗೋಜಿಗೆ ಹೋಗುವುದಿಲ್ಲ ಎಂದು ಹೇಳುವ ಮೂಲಕ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಯಾವುದೇ ಮಿಲಿಟರಿ ಹಸ್ತಕ್ಷೇಪವು ನಿಸ್ಸಂದೇಹವಾಗಿ ಸರಿಪಡಿಸಲಾಗದ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ತಿಳಿಯಬೇಕು ಎಂದು ಅವರು ಹೇಳಿದರು ಹೇಳಿದ್ದಾರೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.