Home News ಮಹಿಳೆಯರ-ಯುವತಿಯರ ನಗ್ನ ಪೋಟೋ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಆರೋಪಿಯ ಬಂಧನ

ಮಹಿಳೆಯರ-ಯುವತಿಯರ ನಗ್ನ ಪೋಟೋ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಆರೋಪಿಯ ಬಂಧನ

by admin
0 comments

ಬಳ್ಳಾರಿ: ನಕಲಿ‌ ಖಾತೆ ಸೃಷ್ಟಿಸಿ ಮಹಿಳೆಯರ ಹಾಗೂ ಯುವತಿಯರ ನಗ್ನ ಪೋಟೋ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕನನ್ನು ಬಳ್ಳಾರಿಯ ಸಂಡೂರಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಬಂದಿತ ಆರೋಪಿ ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎಂದು ತಿಳಿದು ಬಂದಿದೆ.

ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವೀಡಿಯೊ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನ ಮೇರೆಗೆ ಹಲವು ದಿನಗಳಿಂದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು ಗೂಗಲ್​ ಸಹಾಯದಿಂದ ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್​​ ನಲ್ಲಿ ಬರೋಬ್ಬರಿ 13,000ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದೆ.

banner

ದೆಹಲಿಯಲ್ಲಿ ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವೀಡಿಯೊ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ.

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವೀಡಿಯೊಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.