Home News ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು, ಇನ್ನೋರ್ವ ಗಂಭೀರ

ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು, ಇನ್ನೋರ್ವ ಗಂಭೀರ

by admin
0 comments

ಕಾಸರಗೋಡು: ತಳಂಗರೆಯಲ್ಲಿ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಗರದ ನಡೆದಿದೆ.

ಮೃತ ಯುವಕ ಬೆಂಗಳೂರು ಡಿ.ಜೆ ಹಳ್ಳಿಯ ಫೈಝಾನ್(22) ಎಂದು ತಿಳಿದು ಬಂದಿದೆ.

ಗಂಭೀರ ಸ್ಥಿತಿಯಲ್ಲಿದ್ದ ಸಹೋದರ ಸಕ್ಲೈನ್ (20)ನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ತಳಂಗರೆಯ ಮಾಲಿಕ್ ದಿನಾರ್ ಮಸೀದಿಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಸೀದಿ ಹಿಂಬಾಗದ ಕೆರೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಸಕ್ಲೈನ್ ನನ್ನು ರಕ್ಷಿಸಲು ಯತ್ನಿಸುತ್ತಿದ್ದಾಗ ಫೈಝಾನ್ ನೀರಿನಲ್ಲಿ ಮುಳುಗಿದ್ದಾನೆ ಎಂದು ಹೇಳಲಾಗಿದೆ.

banner

ಭಾರೀ ಮಳೆಯಿಂದ ಕೆರೆ ತುಂಬಿ ತುಳುಕುತ್ತಿತ್ತು. ಸಹೋದರ ಕೆರೆಯಲ್ಲಿ ಮುಳುಗುತ್ತಿರುವುದನ್ನು ನೋಡಿದ ಫೈಝಾನ್ ಕೆರೆಗೆ ಹಾರಿ ರಕ್ಷಿಸಲು ಯತ್ನಿಸುತ್ತಿದ್ದಾಗ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಫೈಝಾನ್ ಅದಾಗಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಝಿಯಾರತ್ ಗಾಗಿ ಬೆಂಗಳೂರಿನಿಂದ 11 ಮಂದಿಯ ತಂಡವು ಮಂಗಳವಾರ ಮಾಲಿಕ್ ದಿನಾರ್ ಮಸೀದಿಗೆ ಆಗಮಿಸಿತ್ತು. ಇವರೆಲ್ಲರೂ ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಮರಳುವವರಿದ್ದರು ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.