Home News ಅಕ್ರಮ ಸಂಬಂಧಕ್ಕೆ ಅಡ್ಡಿ; ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ

ಅಕ್ರಮ ಸಂಬಂಧಕ್ಕೆ ಅಡ್ಡಿ; ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ

by admin
0 comments

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಗಂಡನನ್ನೆ ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಕೊಲೆಯಾದ ಪತಿ ಕಬ್ಬಲಿಗ ಸಮಾಜದ ತಿಪ್ಪಣ್ಣ ಕುಪೇಂದ್ರ (30) ಎಂದು ತಿಳಿದು ಬಂದಿದೆ.

ಕೊಲೆಗೈದ ಪತ್ನಿ ಶಾಂತಮ್ಮ ಎಂದು ತಿಳಿದು ಬಂದಿದೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದೆಂದು ಶಾಂತಮ್ಮ ಮತ್ತು ಆಕೆಯ ಪ್ರಿಯಕರ ಸೇರಿ ತಿಪ್ಪಣ್ಣ ಕುಪೇಂದ್ರ ಅವರನ್ನು ತಲೆದಿಂಬಿನಿಂದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

banner

ಶಾಂತಮ್ಮನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಿಯಕರ ಪರಾರಿಯಾಗಿದ್ದು, ಆತನನ್ನು ಕೂಡಲೇ ಬಂಧಿಸಲಾಗುವುದು ಎಂದು ಪಿಎಸ್‌’ಐ ಶ್ರೀಶೈಲ್ ಅಂಬಾಟಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ತಲೆದಿಂಬಿನಿಂದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸುತ್ತಿರುವಾಗ ತಿಪ್ಪಣ್ಣ ಜೋರಾಗಿ ಕಿರುಚಿದ್ದು, ಅಕ್ಕ-ಪಕ್ಕದವರು ಏನಾಗಿದೆ ಎಂದು ಮನೆಯ ಬಾಗಿಲು ಬಡಿದಾಗ ಬಾಗಿಲು ತೆಗೆಯದಿದ್ದಾಗ ಸಂಶಯಗೊಂಡು ತಕ್ಷಣ 112 ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ನಂತರ ಘಟನೆ ಬೆಳಕಿಗೆ ಬಂದಿದೆ.

ಪ್ರಿಯಕರ ಮನೆಯ ಅಟ್ಟದ ಮೇಲಿನ ಕಿಟಕಿಯಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಕೊಲೆಯಾದ ವ್ಯಕ್ತಿಯ ಶವವನ್ನು ಚಿತ್ತಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಂಕರಗೌಡ ಪಾಟೀಲ್‌, ಸಿಪಿಐಗಳಾದ ನಟರಾಜ ಲಾಡೆ, ಚಂದ್ರಶೇಖರ ತಿಗಡಿ, ಎಎಸ್‌ಐ ಲಾಲಹ್ಮದ್, ಸಿಬ್ಬಂದಿಗಳಾದ ದತ್ತು ಜಾನೆ, ರವಿಕುಮಾರ, ಸವಿಕುಮಾರ, ಅನೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.