Home News ತಂದೆ-ತಾಯಿ ಪಡೆದಿದ್ದ ಸಾಲ ಕಟ್ಟಿಲ್ಲ ಎಂದು ಮಗು ಕರೆದೊಯ್ದ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ

ತಂದೆ-ತಾಯಿ ಪಡೆದಿದ್ದ ಸಾಲ ಕಟ್ಟಿಲ್ಲ ಎಂದು ಮಗು ಕರೆದೊಯ್ದ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ

by admin
0 comments

ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ನಿಂದ ತಂದೆ-ತಾಯಿ ಪಡೆದಿದ್ದ ಸಾಲ ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕರೆದುಕೊಂಡು ಹೋಗಿದ್ದ ಘಟನೆ ನಡೆದಿದೆ.

ಕೇವಲ 1280 ರೂಪಾಯಿ ಲೋನ್ ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನು ಸಿಬ್ಬಂದಿ ಕರೆದೊಯ್ದು ನಿಮ್ಮ ತಾಯಿ ಎಲ್ಲಿ ತೋರಿಸಿ ಎಂದು ಮಗುವಿಗೆ ಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ.

ಜಾಲಹಳ್ಳಿ ಗ್ರಾಮದ ನವೀನ್ ಹಾಗೂ ಪ್ರಮೀಳಾ ದಂಪತಿ ಜೀವನ ನಡೆಸಲು ಮೈಕ್ರೋ ಫೈನಾನ್ಸ್ ನಿಂದ 30 ಸಾವಿರ ಸಾಲ ಪಡೆದಿದ್ದರು. ಈ ನಡುವೆ ದಂಪತಿ 13 ತಿಂಗಳು ಲೋನ್ ಕಟ್ಟಿದ್ದು ಈ ತಿಂಗಳು 4 ದಿನ ತಡವಾಗಿದ್ದಕ್ಕೆ ಸಿಬ್ಬಂದಿ ಮನೆಗೆ ಬಂದು ನವೀನ್ ತಾಯಿಗೆ ಬೈದು ಹಣ ಕಟ್ಟುವಂತೆ ಒತ್ತಾಯಿಸಿದ್ದಾರೆ. ಬಳಿಕ ಪಕ್ಕದ ಊರಿನಲ್ಲಿದ್ದ ಮಗುವಿನ ಬಳಿ ತೆರಳಿ ನಿಮ್ಮ ಅಮ್ಮ ಎಲ್ಲಿ ತೋರಿಸು ಬಾ ಎಂದು ಫೈನಾನ್ಸ್ ಸಿಬ್ಬಂದಿ ಕರೆದೊಯ್ದಿದ್ದರು ಎಂದು ಹೇಳಲಾಗಿದೆ.

4 ದಿನಗಳ ಹಿಂದೆ ನಡೆದಿರುವ ಈ ಘಟನೆ ಇದೀಗ ಮೈಸೂರು ಮಕ್ಕಳ ಸಮಿತಿ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.