11
ಬೆಂಗಳೂರು: ನಗರದ ಹಲವು ಡ್ಯಾನ್ಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ನಗರದಾದ್ಯಂತ ಸುಮಾರು 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ, ಕಬ್ಬನ್ ಪಾರ್ಕ್ , ಅಶೋಕ ನಗರ, ಎಸ್.ಜೆ.ಪಾರ್ಕ್ ಸೇರಿ ಅನೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಯುವತಿಯರು ಅರೆಬರೆ ಬಟ್ಟೆ ತೊಟ್ಟು ಡ್ಯಾನ್ಸ್, ಸಮಯ ಮೀರಿ ಬಾರ್ ಓಪನ್, ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪ ಕೇಳಿ ಬಂದ ಹಿನ್ನೆಲೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.