5
ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವ ಘಟನೆ ಶುಕ್ರವಾರ ನಡೆದಿದೆ.
ಹಾಲಿನ ಡೇರಿ ಅಧ್ಯಕ್ಷ ಮರಿಬಸವಯ್ಯ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಗುರುಸಿದ್ದಪ್ಪ ಎಂಬವರ ಜಮೀನಿನಲ್ಲಿ ಹಸುವಿನ ಮೇಲೆ ಕೌರ್ಯ ಎಸಗಲಾಗಿದ್ದು, ಅವರ ವಿರುದ್ಧ ಹಸುವಿನ ಮಾಲೀಕ ಮರಿಬಸವಯ್ಯ ಆರೋಪ ಮಾಡಿದ್ದಾರೆ.
ಈ ಹಿಂದೆ ಡೇರಿ ಅಧ್ಯಕ್ಷ ಚುನಾವಣೆ ವೇಳೆ ಮರಿಬಸವಯ್ಯ ಮತ್ತು ಗುರುಸಿದ್ದಪ್ಪ ನಡುವೆ ವೈಮನಸ್ಸು ಏರ್ಪಟ್ಟಿತು. ಹೀಗಾಗಿ ಗುರುಸಿದ್ದಪ್ಪ ವಿರುದ್ಧ ಹಸುವಿನ ಕೆಚ್ಚಲು ಕೊಯ್ದಿರುವ ಆರೋಪ ಮಾಡಲಾಗಿದೆ.