ಬೆಂಗಳೂರು: ಬೆಂಗಳೂರಿನ ತಲಘಟ್ಟಪುರದಲ್ಲಿ ಸಾಂಬಾರ್ ಮಾಡುವ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಭಾನುವಾರ ತಡರಾತ್ರಿ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿ ನೇಪಾಳ ಮೂಲದ ಬಹದ್ದೂರ್ ಎಂದು ತಿಳಿದು ಬಂದಿದೆ.
ಕೊಲೆಗೈದ ಆರೋಪಿ ಮಹೇಂದ್ರ ಎಂದು ತಿಳಿದು ಬಂದಿದೆ.
ಬಹದ್ದೂರ್ ಮತ್ತು ಮಹೇಂದ್ರ ನಡುವೆ ಭಾನುವಾರ ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ರೂಂನಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು ಬಹದ್ದೂರ್ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.
ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕೊಲೆಯಾದ ಬಹದ್ದೂರ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದನು.