ಮುಂಬೈ: ಮುಂಬೈನ ಜೋಗೇಶ್ವರಿ ಉಪನಗರದಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಮೇಘವಾಡಿ ಪೊಲೀಸರು 24 ವರ್ಷದ ಯುವಕ ಮತ್ತು ಆತನ ಗೆಳತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಗಂಭೀರ ಅಪರಾಧ ಪ್ರಕರಣ ದಾಖಲಿಸಿದ್ದಾರೆ.
ಆ ವ್ಯಕ್ತಿ ತನ್ನ ಗೆಳತಿಯ ಕೇವಲ 10 ವರ್ಷದ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಕ್ರೌರ್ಯದ ಮಿತಿಯನ್ನು ಮೀರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿ ಅಪ್ರಾಪ್ತ ಬಾಲಕಿಯ ಖಾಸಗಿ ಭಾಗಗಳಿಗೆ ಸ್ಕ್ರೂಡ್ರೈವರ್ ಹಾಕಿದ್ದಲ್ಲದೇ ಇಡೀ ಕೃತ್ಯದ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಯಾರಾದರೂ ಪೊಲೀಸರಿಗೆ ಮಾಹಿತಿ ನೀಡಿದರೆ ವೀಡಿಯೊವನ್ನು ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ. ಘಟನೆಯ ನಂತರ, ಬಾಲಕಿ ಮೇಘವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಧೈರ್ಯ ಮಾಡಿದ್ದಾರೆ ಎಂದು ವರದಿ ತಿಳಿಸಿವೆ.