Home News ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಾಡುತ್ತಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಾಡುತ್ತಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

by admin
0 comments

ಕಾನ್ಪುರ: ಉತ್ತರಪ್ರದೇಶ ಕಾನ್ಪುರದಲ್ಲಿ ಸಾನಿಗ್ವಾನ್‌ನಲ್ಲಿರುವ ರೆಸಾರ್ಟ್‌ನಲ್ಲಿ ಪಾರ್ಟಿಯಲ್ಲಿ ಭಾಗಿಯಾಗಿ ಈಜುಕೊಳದಲ್ಲಿ ತನ್ನ ಸ್ನೇಹಿತರೊಂದಿಗೆ ಈಜಾಡುತ್ತಿದ್ದ ಯುವಕನೊಬ್ಬನು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ ಎನ್ನಲಾಗಿದೆ.

ಮೃತ ಯುವಕನನ್ನು ಶಿಖರ್ ಸಿಂಗ್ (24) ಎಂದು ಗುರುತಿಸಲಾಗಿದೆ. ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಈ ದೃಶ್ಯವು ಸೆರೆಯಾಗಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಯುವಕರು ಈಜುಕೊಳದಲ್ಲಿ ಈಜುತ್ತಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಯುವಕನೊಬ್ಬನು ನೀರಿನಲ್ಲಿ ಮುಳುಗುತ್ತಿದ್ದು, ಡಿಜೆಯ ಸೌಂಡ್ ನಿಂದಾಗಿ ಅಲ್ಲೇ ಇದ್ದ ಸ್ನೇಹಿತರಿಗೆ ಈ ಬಗ್ಗೆ ತಿಳಿಯುವುದೇ ಇಲ್ಲ. ನೀರಿನಲ್ಲಿ ಮುಳುಗುತ್ತಿದ್ದಂತೆ ತನ್ನ ಎರಡು ಕೈಗಳನ್ನು ಮೇಲಕ್ಕೆ ಎತ್ತುವುದನ್ನು ಕಾಣಬಹುದು. ಅಷ್ಟೇ ಅಲ್ಲದೇ, ಆ ಬಳಿಕ ತನ್ನ ಎರಡು ಕಾಲುಗಳನ್ನು ಮೇಲಕ್ಕೆ ಎತ್ತುತ್ತಾನೆ. ಕೊನೆಗೆ ಕೈ ಕಾಲುಗಳನ್ನು ಮೇಲಕ್ಕೆ ಎತ್ತಿ, ಮೇಲೆ ಬರಲು ಪ್ರಯತ್ನಿಸುತ್ತಾನೆ. ಆದರೆ ಮೇಲೆ ಬರಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿರುವುದನ್ನು ಈ ವೀಡಿಯೊದಲ್ಲಿ ನೋಡಬಹುದು.

ಸ್ನೇಹಿತರಿಗೆ ಈ ಬಗ್ಗೆ ತಿಳಿಯುತ್ತಿದ್ದಂತೆ ಯುವಕನನ್ನು ನೀರಿನಿಂದ ಹೊರ ತೆಗೆದಿದ್ದಾರೆ. ಆದಾಗಲೇ ಆತ ಮೃತಪಟ್ಟಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

banner

ಘಟನಾ ಸ್ಥಳಕ್ಕೆ ಚಾಕೇರಿ ಪೊಲೀಸ್ ಠಾಣಾ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.