ಮುಂಬೈ: ಸೋಮವಾರ ಲಂಡನ್‌ನಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಐದು ಪ್ರಯಾಣಿಕರು ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ.
ಏರ್ ಇಂಡಿಯಾ ವಿಮಾನ AI 130ರಲ್ಲಿ ಹಲವು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಕೆಲವರಿಗೆ ವಾಕರಿಕೆ ಮತ್ತು ತಲೆತಿರುಗುವಿಕೆ ಸೇರಿದಂತೆ ಆರೋಗ್ಯ ವ್ಯತ್ಯಾಸ ಕಂಡು ಬಂದಿದೆ. ವಿಮಾನದಲ್ಲಿ ಆರು ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 11 ಜನರು ಅಸ್ವಸ್ಥರಾಗಿದ್ದಾರೆ. ಈ ಬಗ್ಗೆ ಏರ್ ಇಂಡಿಯಾ ಕಂಪನಿಯೂ ಕೂಡ ದೃಢಪಡಿಸಿದೆ ಎಂದು ವರದಿ ತಿಳಿಸಿದೆ.
ಈ ಸಂದರ್ಭ ವಿಮಾನ ಮುಂಬೈನಲ್ಲಿ ಇಳಿದಿದೆ. ನಂತರ ಇಬ್ಬರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗೆ ವೈದ್ಯಕೀಯ ನೆರವು ನೀಡಿದೆ ಎಂದು ಹೇಳಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಕೆಲವೊಂದು ಬಾರಿ ಇಂತಹ ಘಟನೆಗಳು ನಡೆಯು ಸಾಧ್ಯತೆ ಇರುತ್ತದೆ. ಏಕೆಂದರೆ ಕ್ಯಾಬಿನ್‌ನಲ್ಲಿ ಒತ್ತಡ ಕೆಲಸಗಳು ಇರುತ್ತದೆ. ಆದರೆ ವಿಷಪ್ರಾಶನ ಆಗಿದ್ದೀಯಾ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಕಂಪನಿ ಹೇಳಿದೆ. ವಿಮಾನದಲ್ಲಿ ನಡೆದ ಈ ಘಟನೆಯ ಬಗ್ಗೆ ಖಂಡಿತ ನಾವು ತನಿಖೆ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಊಟದಿಂದ ಪ್ರಯಾಣಿಕರು ಅಸ್ವಸ್ಥರಾಗಿದ್ದಾರಾ? ಅಥವಾ ಆಮ್ಲಜನಕದ ಕೊರತೆಯಿಂದ ಈ ಸಮಸ್ಯೆ ಆಗಿದೆಯೇ ಎಂಬ ಬಗ್ಗೆ ನೋಡಬೇಕಿದೆ. ಕೆಲವೊಂದು ಬಾರಿ ಆಮ್ಲಜನಕದ ಕೊರತೆಯಿಂದಲ್ಲೂ ಅಸ್ವಸ್ಥರಾಗುವ ಸಾಧ್ಯತೆ ಕೂಡ ಇದೆ ಎಂದು ಕಂಪನಿ ಹೇಳಿದೆ.
ಇನ್ನು ಇದೆ ಊಟವನ್ನು ಪೈಲೆಟ್ಗಳು ಕೂಡ ಮಾಡುತ್ತಾರೆ, ಆದರೆ ಅವರಿಗೆ ಯಾವುದೇ ಇಂತಹ ಸಮಸ್ಯೆ ಕಂಡು ಬಂದಿಲ್ಲ ಎಂದು ಹೇಳಿದ್ದಾರೆ. ಪ್ರಯಾಣಿಕರಿಗೆ ಊಟ ನೀಡಿದ ನಂತರ ಅವರು ಊಟ ಮಾಡುತ್ತಾರೆ. ಲಂಡನ್ ಹೀಥ್ರೂದಿಂದ ಮುಂಬೈಗೆ ಹೊರಟಿದ್ದ AI-130 ವಿಮಾನದಲ್ಲಿ, ಐದು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗೆ ಹಾರಾಟದ ವೇಳೆ ತಲೆತಿರುಗುವಿಕೆ ಮತ್ತು ವಾಕರಿಕೆ ಕಾಣಿಸಿಕೊಂಡಿದೆ ಎಂದು ಏರ್ ಇಂಡಿಯಾ ಹೇಳಿದೆ. ವಿಮಾನವು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಯಾವುದೇ ಅಪಾಯ ಆಗಿಲ್ಲ. ನಮ್ಮ ವೈದ್ಯಕೀಯ ತಂಡಗಳು ತಕ್ಷಣದ ವೈದ್ಯಕೀಯ ನೆರವು ನೀಡಿದ್ದಾರೆ. ಇಬ್ಬರು ಪ್ರಯಾಣಿಕರು ಮತ್ತು ಇಬ್ಬರು ಕ್ಯಾಬಿನ್ ಸಿಬ್ಬಂದಿಗೆ ಈ ಸಮಸ್ಯೆಯನ್ನು ಅನುಭವಿಸಿದ್ದಾರೆ. ಇದೀಗ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಅವರನ್ನು ಆಸ್ಪತ್ರೆಯಿಂದ ವಾಪಸ್ಸು ಕಳುಹಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಕಂಪನಿಯ ಅಧಿಕಾರಿಗಳು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.